News Karnataka Kannada
Sunday, May 19 2024
ದೆಹಲಿ

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ವ್ಯಕ್ತಿಯ ಬಂಧನ

Photo Credit : News Kannada

ನಟಿ ರಶ್ಮಿಕಾ ಮಂದಣ್ಣ ಅವರ ಈ ಡೀಪ್‌ಫೇಕ್ ವಿಡಿಯೋ  ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟಿದ್ದರು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ವೈರಲ್ ಆಗಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿತ್ತು.

ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು