Categories: ದೆಹಲಿ

ನಟಿ ರಶ್ಮಿಕಾ ಮಂದಣ್ಣ ಡೀಪ್‌ ಫೇಕ್‌ ವಿಡಿಯೋ ವೈರಲ್‌ ನಾಲ್ವರು ವಶಕ್ಕೆ

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ನಾಲ್ವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡಿದಿರುವ ನಾಲ್ವರ ಪೈಕಿ ಮೂವರ ಮಾಹಿತಿಯನ್ನು ಫೇಸ್‌ಬುಕ್ ಮೆಟಾ ನೀಡಿತ್ತು. ಈ ಮಾಹಿತಿ ಪಡೆದ ದೆಹಲಿ ಸೈಬರ್ ಪೊಲೀಸರು ಒಟ್ಟು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಪ್ಲೋಡ್ ಮಾಡಿದ ವ್ಯಕ್ತಿಗಳು ವಿಡಿಯೋ ಡಿಲೀಟ್ ಮಾಡಿದ್ದರು. ಹೀಗಾಗಿ ಪೊಲೀಸರಿಗೆ ಆರೋಪಿಗಳನ್ನು ಟ್ರೇಸ್ ಮಾಡುವುದು ಕಷ್ಟವಾಗಿತ್ತು.

ಸದ್ಯ ವಶದಲ್ಲಿರುವ ನಾಲ್ವರು ಡೀಪ್ ಫೇಕ್ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಆದರೆ ಈ ವಿಡಿಯೋವನ್ನು ಅಭಿವೃದ್ಧಿಪಡಿಸಿದ ವ್ಯಕ್ತಿಯ ಹುಡುಕಾಟ ನಡೆಯುತ್ತಿದೆ. ಭಾರಿ ಚಾಕಚಕ್ಯತೆ ಬಳಿಸಿರುವ ಕಾರಣ ಈ ವಿಡಿಯೋ ಅಭಿವೃದ್ಧಿಪಡಿಸಿದ ಆರೋಪಿಗಳ ಪತ್ತೆ ಕಷ್ಟವಾಗುತ್ತಿದೆ. ಆದರೆ ಸೈಬರ್ ಪೊಲೀಸರು, ಮೆಟಾ ಸೇರಿದಂತೆ ಇತರ ಮಾಹಿತಿಗಳ ಆಧರಿಸಿ ಶೀಘ್ರದಲ್ಲೇ ಪ್ರಮುಖ ಆರೋಪಿ ಪತ್ತೆಹಚ್ಚುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.

Ramya Bolantoor

Recent Posts

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

15 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

20 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

38 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

40 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

44 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

54 mins ago