Categories: ದೆಹಲಿ

ಲಾವೋಸ್‌ನಲ್ಲಿ ತೊಂದರೆಗೆ ಸಿಲುಕಿದ್ದ 17 ಭಾರತೀಯರ ರಕ್ಷಣೆ : ವಿದೇಶಾಂಗ ಸಚಿವ

ನವದೆಹಲಿ:  ಕೆಲಸಕ್ಕೆಂದು ದಕ್ಷಿಣ ಏಷ್ಯಾ ರಾಷ್ಟ್ರ ಲಾವೋಸ್‌ ಹೋಗಿದ್ದ ಭಾರತೀರಯರ ತೊಣದರೆಗೆ ಸಿಲುಕಿಕೊಂಡಿದ್ದರು ಇದೀಗ ಈ ಸಂಬಂಧ 17 ಮಂದಿಯನ್ನು ರಕ್ಷಿಸಿ ಭಾರತಕ್ಕೆ ಕಳುಹಿಸಲಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

ಲಾವೋಸ್‌ನ ಗೋಲ್ಡನ್ ಟ್ರಯಾಂಗಲ್ ವಿಶೇಷ ಆರ್ಥಿಕ ವಲಯದಲ್ಲಿ ಕಾಲ್-ಸೆಂಟರ್ ಹಗರಣಗಳು ಮತ್ತು ಕ್ರಿಪ್ಟೋ ಕರೆನ್ಸಿ ವಂಚನೆಯಲ್ಲಿ ಭಾಗಿಯಾಗಿರುವ ಮೋಸಗಾರ ಸಂಸ್ಥೆಗಳಿಂದ ಥೈಲ್ಯಾಂಡ್ ಅಥವಾ ಲಾವೋಸ್‌ನಲ್ಲಿ ಉದ್ಯೋಗ ಒದಗಿಸುವುದಾಗಿ ಭಾರತೀಯ ಪ್ರಜೆಗಳನ್ನು ವಂಚಿಸಲಾಗುತ್ತಿದೆ. ವಿಶೇಷವಾಗಿ ‘ಡಿಜಿಟಲ್ ಸೇಲ್ಸ್ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ಸ್’ ಮುಂತಾದ ಕ್ಷೇತ್ರಗಳಲ್ಲಿ ವಂಚನೆ ಅಧಿಕ ಎಂದು ಮೂಲಗಳು ತಿಳಿಸಿವೆ.

ಕಾಂಬೋಡಿಯಾದಲ್ಲಿ ಲಾಭದಾಯಕ ಉದ್ಯೋಗಾವಕಾಶಗಳ ಭರವಸೆ ನೀಡಿ ಮಾನವ ಕಳ್ಳಸಾಗಣೆ ನಡೆಸುವ ವಂಚಕರ ಬಲೆಗೆ ಬೀಳದಂತೆ ವಿದೇಶಾಂಗ ಸಚಿವಾಲಯ ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ ನೀಡಿದ ನಂತರ ಈ ಬೆಳವಣಿಗೆ ಕಂಡು ಬಂದಿದೆ ಎನ್ನಲಾಗಿದೆ.

ಈ ಕುರಿತು ಜೈಶಂಕರ್ ʼಮೋದಿ ಕಿ ಗ್ಯಾರಂಟಿ’ ದೇಶ ಮತ್ತು ವಿದೇಶಗಳಲ್ಲಿ ಕೆಲಸ ಮಾಡುತ್ತದೆ. ಲಾವೋಸ್‌ಗೆ ಕೆಲಸಕ್ಕೆಂದು ಹೋಗಿ ಸುರಕ್ಷಿತವಲ್ಲದ ಕೆಲಸಗಳಲ್ಲಿ ತೊಡಗಿಸಿದ್ದ ಹಾಗೂ ಕಾನೂನುಬಾಹಿರ ಕೆಲಸಕ್ಕೆ ಪ್ರೇರೇಪಿಸುವವರ ಜಾಲಕ್ಕೆ ಸಿಲುಕಿದ್ದ 17 ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಇದು ಲಾವೋಸ್‌ನಲ್ಲಿನ ನಮ್ಮ ರಾಯಭಾರ ಕಚೇರಿ ಅಧಿಕಾರಿಗಳ ಪರಿಶ್ರಮಕ್ಕೆ ಹಿಡಿದ ಕನ್ನಡಿʼʼ ಎಕ್ಸ್‌ನಲ್ಲಿ ಪೋಟೋ ಸಹಿತ ಬರೆದಿದ್ದಾರೆ.

Nisarga K

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

5 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

15 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

27 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

51 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

51 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago