Categories: ದೆಹಲಿ

ಹೊಸದಿಲ್ಲಿ: ಸುಪ್ರೀ ಕೋರ್ಟಿನ ನಿವೃತ್ತ ನ್ಯಾಯಾಧೀಶ ಅಬ್ದುಲ್‌ ನಜೀರ್‌ ರಾಜ್ಯಪಾಲರಾಗಿ ನೇಮಕ

ಹೊಸದಿಲ್ಲಿ: ಮೂಲತಃ ಮೂಡುಬಿದಿರೆಯವರಾದ ಸುಪ್ರೀ ಕೋರ್ಟಿನ ವಿಶ್ರಾಂತ ನ್ಯಾಯಾಧೀಶ ಎಸ್‌. ಅಬ್ದುಲ್‌ ನಜೀರ್‌ ಅವರನ್ನು ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ನೇಮಿಸಿದ್ದಾರೆ. ಎಸ್. ಅಬ್ದುಲ್ ನಜೀರ್ ಅವರು ಆಂಧ್ರದ ರಾಜ್ಯಪಾಲರಾಗಿದ್ದಾರೆ.

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ರಾಧಾಕೃಷ್ಣ ಮಾಥುರ್ ರಾಜೀನಾಮೆ ನೀಡಿದ್ದು, ಅದನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲ ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಕಾತಿ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ನಿರ್ಗಮಿತ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸ್ಥಾನವನ್ನು ಮಾಜಿ ಕೇಂದ್ರ ಸಚಿವ ಹಾಗೂ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ತುಂಬಿದ್ದಾರೆ. ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ನೇಮಕವಾಗಿದ್ದಾರೆ.
ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಬಿ.ಡಿ. ಮಿಶ್ರಾ ಅವರನ್ನು ಲಡಾಖ್​ಗೆ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಅರುಣಾಚಲ ಪ್ರದೇಶಕ್ಕೆ ಹೊಸ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ನಾಯಕ್ ನೇಮಕವಾಗಿದ್ದಾರೆ.

Gayathri SG

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

10 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

25 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

38 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago