Categories: ದೆಹಲಿ

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ನವದೆಹಲಿ:  ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ ಅವರು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು,  ಸಲ್ಲಿಸಿದ ಅಫಿಡವಿಟ್‌ನಲ್ಲಿ, ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ” ಎಂದು ತನಿಖಾ ಸಂಸ್ಥೆ ಹೇಳಿದೆ. ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡುವ ಸಾಧ್ಯತೆ ಇದೆ.

ಚುನಾವಣೆಗಾಗಿ ಪ್ರಚಾರ ಮಾಡುವ ಹಕ್ಕು ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ.

ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡವಿಟ್ ನಲ್ಲಿ ಹೇಳಿದೆ.

Ashika S

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

11 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

15 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

49 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

2 hours ago