ದೆಹಲಿ: ದೆಹಲಿ ಅಬಕಾರಿ ನೀತಿ ಹಾಗೂ ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ರನ್ನು ಅ.27 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಇದೇ ವೇಳೆ ಸಿಂಗ್ ಅವರು ಮಧುಮೇಹಿಯಾಗಿರುವುದರಿಂದ ಔಷಧಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ. ಅ.10 ರಂದು, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರ ಇಡಿ ಕಸ್ಟಡಿಯನ್ನು ನ್ಯಾಯಾಲಯವು ಅ.13 ರವರೆಗೆ ವಿಸ್ತರಿಸಿತ್ತು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅ.4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.