ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಡಿಕೆ ಶಿವಕುಮಾರ್ಗೆ ನೋಟಿಸಿ ಜಾರಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ತರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಇದನ್ನು ತೆರವು ಕೋರಿ ಸಿಬಿಐ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು ಸಿಬಿಐನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆ ನ. 7 ಕ್ಕೆ ಮುಂದೂಡಿದೆ.