Categories: ದೆಹಲಿ

ಮೋದಿಯ ಶೈಕ್ಷಣಿಕ ಅರ್ಹತೆ ಬಗ್ಗೆ ಮಾನನಷ್ಟ ಕೇಸ್: ಕೇಜ್ರಿವಾಲ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ

ದೆಹಲಿ: ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತು ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಆರ್‌ಟಿಐ ಕಾಯ್ದೆಯಡಿ ಮೋದಿಯ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಮಾಹಿತಿ ಆಯುಕ್ತರ ಆದೇಶವನ್ನು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದ ನಂತರ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಕೇಜ್ರಿವಾಲ್ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣವು ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ ಮತ್ತು ಆ.29 ರಂದು ವಿಚಾರಣೆ ಮಾಡಲಾಗುವುದು. ಹಾಗಾಗಿ ಅರ್ಜಿಯ ಕುರಿತು ನೋಟಿಸ್ ನೀಡುತ್ತಿಲ್ಲ ಎಂದು ಹೇಳಿದೆ. ಗುಜರಾತ್ ವಿಶ್ವವಿದ್ಯಾನಿಲಯ ಮತ್ತು ಕೇಜ್ರಿವಾಲ್ ತಮ್ಮ ದೂರುಗಳನ್ನು ಹೈಕೋರ್ಟ್‌ನಲ್ಲಿ ಎತ್ತಬಹುದು ಎಂದು ಪೀಠ ಹೇಳಿದೆ.

Ashika S

Recent Posts

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

2 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

10 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

24 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

24 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

48 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

51 mins ago