ಹೊಸದಿಲ್ಲಿ: ವಸಾಹತುಶಾಹಿ ಕಾಲದ ದೇಶದ್ರೋಹ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.12ರಂದು ಕೈಗೆತ್ತಿಕೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ. ಜೆ.ಬಿ. ಪರ್ದಿವಾಲಾ, ನ್ಯಾ. ಮನೋಜ್ ಸಿನ್ಹಾ ಅವರನ್ನೊಳಗೊಂಡ ನ್ಯಾಯ ಪೀಠ ವಿಚಾರಣೆ ನಡೆಸಲಿದೆ.
ಮೇ. 1ರಂದೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಹಳೆಯ ಕಾಯ್ದೆಯನ್ನು ಪುನರ್ ಪರಿಶೀಲಿಸುವ ಪ್ರಕ್ರಿಯೆ ಮುಂಚೂಣಿ ಘಟ್ಟವನ್ನು ತಲುಪಿದೆ ಎಂದು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡಿದ್ದರು.