ದೆಹಲಿ

ಐಸಿಸ್ ಉಗ್ರರಿಗಾಗಿ 22 ಸ್ಥಳಗಳಲ್ಲಿ ತೀವ್ರ ಹುಡುಕಾಟ

ಹೊಸದಿಲ್ಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ತಮಿಳುನಾಡಿನ ಕೊಯಮತ್ತೂರಿನ 22 ಸ್ಥಳಗಳು, ಚೆನ್ನೈನ ಮೂರು ಸ್ಥಳಗಳು ಮತ್ತು ಹೈದರಾಬಾದ್‌ನ ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

2022ರ ಅಕ್ಟೋಬರ್ 21ರಂದು ಕೊಯಮತ್ತೂರಿನ ಉಕ್ಕಮನಲ್ಲಿರುವ ಈಶ್ವರನ್ ಕೋವಿಲ್ ಸೀಟ್‌ನಲ್ಲಿರುವ ಕೊಟ್ರೆ ಸಂಗಮೇಶ್ವರ‌ ದೇವಸ್ಥಾನದ ಮುಂಭಾಗದಲ್ಲಿ ಸ್ಫೋಟ ನಡೆದಿತ್ತು. ಈ ವೇಳೆ ಸುಧಾರಿತ ಸ್ಪೋಟಕ ಸಾಧನದೊಂದಿಗೆ ಕಾರನ್ನು ಓಡಿಸಿದ ಐಸಿಸ್ ಅನುಯಾಯಿ ಜಮೇಶಾ ಮುಬೀನ್ ಮೃತಪಟ್ಟಿದ್ದ ತನಿಖೆಯಿಂದ ಅವನು ಕೊಯಮತ್ತೂರಿನ ಕುನಿಯಮುತ್ತೂರಿನಲ್ಲಿ ಕೋವೈ ಅರೇಬಿಕ್ ಕಾಲೇಜಿನಲ್ಲಿ ಓದುತ್ತಿದ್ದದ್ದು ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ 6 ಗಂಟೆಗೆ ಕೊಯಮತ್ತೂರು ನಗರದ ಕರುಂಬುಕಡೆ, ಜಿಎಂ ನಗರ, ಕಿನಾತುಕಡವು, ಕವುಂಡಂಪಾಳ್ಯಂ, ಉಕ್ಕಡಂ ಮತ್ತು ಇನ್ನೂ ಕೆಲವು ಪ್ರದೇಶಗಳು ಸೇರಿ 22 ಸ್ಥಳಗಳಲ್ಲಿ ಶೋಧ ಆರಂಭಿಸಿದ ತಮಿಳುನಾಡು ರಾಜಧಾನಿ ಚೆನ್ನೈನ ನೀಲಂಕಾರ, ಅಯನವರಂ ಮತ್ತು ತಿರುವಿ ಕಾ ನಗರ್‌ನಲ್ಲಿಯೂ ಹುಡುಕಾಟ ಆರಂಭಿಸಿದ್ದಾರೆ.

ಕೊಯಮತ್ತೂರು ನಗರದ ಪೆರುಮಾಳ್ ಕೋವಿಲ್ ಸೀಟ್‌ನಲ್ಲಿರುವ ಕೊಯಮತ್ತೂರು ಕಾರ್ಪೊರೇಷನ್‌ನ ಡಿಎಂಕೆ ಕೌನ್ಸಿಲರ್. ಎಂ. ಮುಬಸೀರಾ ನಿವಾಸದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಶೋಧ ನಡೆಸುತ್ತಿದೆ ಈ ಕೌನಿಲರ್‌ನ ಪತಿ ಅರೇಬಿಕ್‌ ಕಾಲೇಜಿನಲ್ಲಿ ಒದುತ್ತಿದ್ದರು ಎಂದೂ ಮೂಲಗಳು ತಿಳಿಸಿವೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago