ದೆಹಲಿ: ಡೀಪ್ಫೇಕ್ಗಳಂತಹ ಆಕ್ಷೇಪಾರ್ಹ ವಿಷಯಗಳಿಂದ ನೊಂದಿದ್ದರೆ ಐಟಿ ನಿಯಮಗಳ ಉಲ್ಲಂಘನೆಗಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸರ್ಕಾರವು ನಾಗರಿಕರಿಗೆ ಸಹಾಯ ಮಾಡುತ್ತದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ಐಟಿ ನಿಯಮಗಳ ಪ್ರಕಾರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಗೆ ಅವುಗಳ ಬಳಕೆಯ ನಿಯಮಗಳನ್ನು ಹೊಂದಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಸಾಮಾಜಿಕ ಮಾಧ್ಯಮ ವೇದಿಕೆಗಳೊಂದಿಗೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಐಟಿ ನಿಯಮ ಉಲ್ಲಂಘನೆಗಳ ಬಗ್ಗೆ ಬಳಕೆದಾರರು ತಿಳಿಸಬಹುದಾದ ವೇದಿಕೆಯನ್ನು ಅಭಿವೃದ್ಧಿಪಡಿಸುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಇಂದಿನಿಂದ ಐಟಿ ನಿಯಮಗಳ ಉಲ್ಲಂಘನೆಯನ್ನು ಸಹಿಸುವುದಿಲ್ಲ ಎಂದು ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.