News Karnataka Kannada
Monday, April 29 2024
ದೆಹಲಿ

ಪತಿ ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸುತ್ತಿಲ್ಲ ಎಂದು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತ್ನಿ

ಪತಿ ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸುತ್ತಿಲ್ಲ ಎನ್ನುವ ಕಾರಣಕ್ಕೆ ಪತ್ನಿಯೇ ಪೊಲೀಸ್‌ ಠಾಣೆ ಮೆಟ್ಟಿಲೇರಿ ಎಫ್‌ಐಆರ್‌ ದಾಖಲಿಸಿದ ಬಿಹಾರದ ಮಿಜಾಫರ್‌ಪುರದಲ್ಲಿ ನಡೆದಿದೆ.
Photo Credit : Freepik

ನವದೆಹಲಿ: ಪತಿ ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸುತ್ತಿಲ್ಲ ಎನ್ನುವ ಕಾರಣಕ್ಕೆ ಪತ್ನಿಯೇ ಪೊಲೀಸ್‌ ಠಾಣೆ ಮೆಟ್ಟಿಲೇರಿ ಎಫ್‌ಐಆರ್‌ ದಾಖಲಿಸಿದ ಬಿಹಾರದ ಮಿಜಾಫರ್‌ಪುರದಲ್ಲಿ ನಡೆದಿದೆ.

ವೈಶಾಲಿ ಜಿಲ್ಲೆಯ ಲಾಲ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ಮೂಲದ ಮಹಿಳೆ ಈ ಕೇಸ್‌ ದಾಖಲಿಸಿದ್ದಾಳೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ, “ನನಗೆ 31 ಮೇ 2021 ರಂದು ಮದುವೆಯಾಗಿತ್ತು. ಮದುವೆಯಾಗಿ ಎರಡು ವರ್ಷಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪತಿ ನನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿಲ್ಲ. ಇದೇ ವಿಚಾರವನ್ನು ನಾನು ನನ್ನ ಅತ್ತೆಗೆ ತಿಳಿಸಿದಾಗ ಅವರಿಂದಲೂ ಯಾವುದೇ ಸಹಾಯ ನನಗೆ ಸಿಕ್ಕಿಲ್ಲ. ಈ ಕುರಿತಂತೆ ನಾನು ನನ್ನ ಪತಿಯನ್ನು ಪ್ರಶ್ನೆ ಮಾಡಿದಾಗ, ನನ್ನ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ನಾನು ನನ್ನ ತಾಯಿಯ ಮನೆಗೆ ಹೊರಟಲು ನಿಂತಾಗ ಎಲ್ಲರೂ ಸೇರಿ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು