Categories: ದೆಹಲಿ

ಮೋದಿ, ಅಮಿತ್​​ ಶಾ ಅವರನ್ನು ಹೊಗಳಿದ ಶೆಹ್ಲಾ ರಶೀದ್

ದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್  ಇದೀಗ ಮೋದಿ ಮತ್ತು ಅಮಿತ್​​ ಶಾ ಅವರನ್ನು ಹೊಗಳಿದ್ದಾರೆ.

ನರೇಂದ್ರ ಮೋದಿ  ಮತ್ತು ಅಮಿತ್​​ ಶಾ  ಅವರ ವಿರುದ್ಧ ಕಿಡಿಕಾರುತ್ತಿದ್ದ  ಶೆಹ್ಲಾ ರಶೀದ್ ಅವರು ಈ ಹಿಂದೆಯು ಮೋದಿ ಸರ್ಕಾರವನ್ನು ಹೊಗಳಿದ್ದರು. ಇದಕ್ಕೆ ಕಾರಣ ಮೋದಿ ಮತ್ತು ಅಮಿತ್​​ ಶಾ ಕಾಶ್ಮೀರದಲ್ಲಿ ಮಾಡಿದ ಮೋಡಿ.

ಕಾಶ್ಮೀರದಲ್ಲಿ ಮೋದಿ-ಶಾ ಮಾಡಿದ ಕೆಲಸವನ್ನು ಶ್ಲಾಘಿಸಿದ್ದಾರೆ. ಕಾಶ್ಮೀರ ಗಾಜಾ ಪಟ್ಟಿ ಅಲ್ಲ, ಅದು ತುಂಬಾ ಬದಲಾಗಿದೆ. ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿ ತುಂಬಾ ಸುಧಾರಿಸಿದೆ. ಅಲ್ಲಿನ ಜನ ತುಂಬಾ ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನೀವು ಕಲ್ಲು ತೂರಾಟ ನಡೆಸುವವರನ್ನು ಎಂದಾದರೂ ಬೆಂಬಲಿಸಿದ್ದೀರಾ ಎಂದು ಶೆಹ್ಲಾ ಅವರನ್ನು ಈ ಸಂದರ್ಶನದಲ್ಲಿ ಕೇಳಲಾಯಿತು, ಉತ್ತರಿಸಿದ ರಶೀದ್   ಹೌದು ಅದು 2010ರಲ್ಲಿ ಬೆಂಬಲಿಸಿದ್ದೆ,  ಆದರೆ ಈಗ ಮಾಡಲ್ಲ, ಕಾಶ್ಮೀರದ ಈಗಿನ ಪರಿಸ್ಥಿತಿ ತುಂಬಾ ಭಿನ್ನವಾಗಿದೆ.

ಸಾಮಾಜಿಕವಾಗಿ ಅನೇಕ ಅಭಿವೃದ್ಧಿಯಾಗಿದೆ. ಇದರ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಶ್ಮೀರದ ರಾಜಕೀಯ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ  ಈ ಕಾರಣಕ್ಕೆ ನಾನು ಮೋದಿ ಸರ್ಕಾರಕ್ಕೆ ತುಂಬಾ ಕೃತಜ್ಞನಾಗಿದ್ದೇನೆ ಎಂದರು.

Ashika S

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

6 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

16 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

31 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

46 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

47 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago