ಶಿವಮೊಗ್ಗ

ಶಿವಮೊಗ್ಗ: ಸರ್ಕಾರಿ ನೌಕರರಿಗೆ ಸುಸರ್ಜಿತ ಕ್ಷೇಮ ಕೇಂದ್ರ ಸ್ಥಾಪಿಸಲು ಆರೋಗ್ಯ ಸಚಿವರಿಗೆ ಮನವಿ

ಶಿವಮೊಗ್ಗ:  ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರರವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ  ಮನ್ಸುಖ ಮಾಂಡವೀಯ ಇವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಕುಟುಂಬಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಸುಸರ್ಜಿತ ಕ್ಷೇಮ ಕೇಂದ್ರವನ್ನು (CGHS Wellness Centre) ಕೂಡಲೇ ಆರಂಭಿಸಲು ಮನವಿ ಮಾಡಿಕೊಂಡರು.

ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 3500 ಸಾವಿರ ಕೇಂದ್ರ ಸರ್ಕಾರದ ನೌಕರರು ಹಾಗೂ ನಿವೃತ್ತ ನೌಕರರಿದ್ದು, ಇವರುಗಳ ಕ್ಷೇಮಾಭಿವೃದ್ಧಿಯನ್ನು ಕಾಪಾಡಿಕೊಂಡು ಬರಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಸುಸರ್ಜಿತ ಕ್ಷೇಮ ಕೇಂದ್ರದ (CGHS Wellness Centre) ಅವಶ್ಯಕತೆ ಇದ್ದು, ಹಾಲಿ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಇಂತಹ ಕ್ಷಮಾ ಕೇಂದ್ರವನ್ನು ಕೇಂದ್ರ ಸರ್ಕಾರ ತೆರೆದಿರುತ್ತದೆ. ಆದರೆ, ತುರ್ತು ಸಂದರ್ಭಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನೆಲೆಸಿರುವ ಕೇಂದ್ರ ಸರ್ಕಾರದ ನೌಕರರಿಗೆ ಈ ಸೇವೆಯನ್ನು ಪಡೆಯಲು ಸಮಯದ ಅಭಾವದಿಂದ ಅನಾನುಕೂಲ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ಕ್ಷೇಮ ಕೇಂದ್ರವನ್ನು ಶಿವಮೊಗ್ಗದಲ್ಲಿ ಕೂಡಲೇ ಆರಂಭಿಸಲು ಮನವಿ ಮಾಡಿಕೊಂಡರು. ರಾಜ್ಯ ಸರ್ಕಾರದಿಂದ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಲಾಗುವುದು ಎಂದು ಈ ಸಂದರ್ಭದಲ್ಲಿ ಕೋರಿದ್ದಾರೆ.
~ಸಂಸದರ ಆಪ್ತ ಸಹಾಯಕರು ,ಶಿವಮೊಗ್ಗ

Sneha Gowda

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

10 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

20 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

25 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

32 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

42 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

46 mins ago