Categories: ದೆಹಲಿ

ಶಿರಾಡಿ ಸುರಂಗ ಮಾರ್ಗ: ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಜಾರಕಿಹೊಳಿ

ನವದೆಹಲಿ: ಶಿರಾಡಿ ಘಾಟ್ ಸುರಂಗ ಮಾರ್ಗ ಹಾಗೂ ತುಮಕೂರು ರಸ್ತೆಯ ಪೀಣ್ಯ ಕೈಗಾರಿಕಾ ಪ್ರದೇಶದಿಂದ ತಮಿಳುನಾಡಿನ ಗಡಿ ಪ್ರದೇಶ ಹೊಸೂರುವರೆಗೆ ಸುರಂಗ ರಸ್ತೆ ನಿರ್ಮಾಣ ಸಂಬಂಧ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದರು.

‌ ಸೋಮವಾರ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿ ಮಾಡಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಮಕೂರು ರಸ್ತೆಯ ಪೀಣ್ಯ ಕೈಗಾರಿಕಾ ಪ್ರದೇಶದಿಂದ ತಮಿಳುನಾಡಿನ ಗಡಿ ಪ್ರದೇಶ ಹೊಸೂರುವರೆಗೆ ಸುರಂಗ ರಸ್ತೆಯನ್ನು ನಿರ್ಮಾಣ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದರು.

ಈ ವೇಳೆ ರಾಜ್ಯದಲ್ಲಿ ಒಟ್ಟು 14 ಯೋಜನೆಗಳನ್ನು ನಿರ್ಮಾಣ ಮಾಡುಂತೆ ಕೇಂದ್ರ ಸಚಿವರಿಗೆ ಮನವಿಯನ್ನು ಸಲ್ಲಿಕೆ ಮಾಡಿದರು. ಇಲ್ಲಿ ಫ್ಲೈಓವರ್‌ ರಸ್ತೆಗಳು, ಘಾಟ್‌ ರಸ್ತೆಗಳು, ಸುರಂಗ ರಸ್ತೆಗಳು ಹಾಗೂ ಇತರೆ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡುವಂತೆ ಸತೀಶ್‌ ಜಾರಕಿಹೊಳಿ ಸಲ್ಲಿಸಿರುವ ಪ್ರಸ್ತಾವನೆ ಒಳಗೊಂಡಿದೆ.

ಅದೇ ರೀತಿ ಬೆಳಗಾವಿ ನಗರ- ಪುಣೆ -ಬೆಂಗಳೂರು ರಸ್ತೆ ಉನ್ನತೀಕರಣ ಮಾಡಬೇಕು. ರಾಯಚೂರು, ಗದಗ ಮತ್ತು ಶಿವಮೊಗ್ಗ ನಗರಗಳಿಗೆ ರಿಂಗ್ ರಸ್ತೆಯನ್ನು ನಿರ್ಮಾಣ ಮಾಡಬೇಕು. ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ನಲ್ಲಿ ಫೈಓವರ್ ನಿರ್ಮಾಣ ಮಾಡುವಂತೆಯೂ ಮನವಿ ಮಾಡಲಾಗಿದೆ. ಈ ಎಲ್ಲ ಮನವಿ ಪುರಸ್ಕರಿಸಿದಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ಉಂಟಾಗುತ್ತಿದ್ದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ಮನವಿ ಸಲ್ಲಿಸಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

43 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago