News Karnataka Kannada
Sunday, April 28 2024
ದೆಹಲಿ

ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ವಿಚ್ಛೇದನ ನೀಡಿ 2ನೇ ಮದುವೆಯಾದ ಶೋಯೆಬ್ ಮಲಿಕ್

ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಶೋಯೆಬ್ ಮಲಿಕ್ ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ಕೈಕೊಟ್ಟಿದ್ದಾರೆ. ಶೋಯೆಬ್ ಮಲಿಕ್ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Photo Credit : News Kannada

ದೆಹಲಿ: ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಶೋಯೆಬ್ ಮಲಿಕ್ ಭಾರತದ ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ಕೈಕೊಟ್ಟಿದ್ದಾರೆ. ಶೋಯೆಬ್ ಮಲಿಕ್ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶೋಯೆಬ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದು, ಶನಿವಾರ ಬೆಳಿಗ್ಗೆ ಅವರು ತಮ್ಮ ಮದುವೆಯ ಫೋಟೋವನ್ನು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010ರಲ್ಲಿ ಹೈದರಾಬಾದ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ 2018ರಲ್ಲಿ ಇಜಾನ್ ಎಂಬ ಗಂಡು ಮಗು ಜನಿಸಿದೆ.

ಶೋಯೆಬ್ ಈ ಹಿಂದೆ ಭಾರತದ ಟೆನಿಸ್ ಸೆನ್ಸೇಷನ್ ಸಾನಿಯಾ ಮಿರ್ಜಾ ಅವರನ್ನು ಮದುವೆಯಾಗಿದ್ದರು. ಆದರೆ , ಕಳೆದ ಕೆಲವು ಸಮಯದಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹರಿದಾಡಿತ್ತು.

ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, ”ವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,” ಎಂದು ಬರೆದುಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು