News Karnataka Kannada
Thursday, May 02 2024
ದೆಹಲಿ

ಶೋಭಾ ಕರಂದ್ಲಾಜೆಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ

Shobha Karandlaje gets additional charge of portfolio
Photo Credit : News Kannada

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಇದೀಗ ಕೇಂದ್ರ ಸಚಿವ ಸಂಪುಟಕ್ಕೆ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ ನೀಡಲಾಗಿದೆ.

ಈಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಇವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರಿಗೆ ಈಗ ಇರುವ ಖಾತೆಯ ಜೊತೆಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರೂ ಆಗಿರುವ ಶೋಭಾ ಕರಂದ್ಲಾಜೆ ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ. ರಾಜೀವ್ ಚಂದ್ರಶೇಖರ್ ಅವರು ತಮ್ಮ ಈಗಿರುವ ಖಾತೆ ಜೊತೆಗೆ ಹೆಚ್ಚುವರಿಯಾಗಿ ಜಲಶಕ್ತಿ ರಾಜ್ಯ ಸಚಿವರಾಗಿ ಕೆಲಸ ನಿರ್ವಹಿಸಲಿದ್ದಾರೆ.

ಕೇಂದ್ರ ಸಚಿವರಾದ ಭಾರತಿ ಪ್ರವೀಣ್ ಪವಾರ್ ಅವರಿಗೆ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು