News Karnataka Kannada
Friday, April 12 2024
Cricket
ದೆಹಲಿ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

cm pm
Photo Credit : Twitter

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪ್ರಧಾನಿ ಅವರನ್ನು ಗುರುವಾರ ಬೆಳಗ್ಗೆ ಪ್ರಧಾನಿ ಅವರನ್ನು ಭೇಟಿಯಾಗಿ ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸಿದರು. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಅವರನ್ನು ಭೇಟಿಯಾಗಿದ್ದಾರೆ.

ಮೋದಿಗೆ ಮೈಸೂರು ಪೇಟ: ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದು, ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಮೋದಿ ಜೊತೆಗೆ ಐದು ನಿಮಿಷ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ದೆಹಲಿಯಲ್ಲಿ ರಾಜನಾಥ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ ಅವರು ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಏರ್​ಶೋ ಆಯೋಜಿಸಲು ಮನವಿ ಮಾಡಿದರು. ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಅವರನ್ನು ಭೇಟಿಯಾದರು.
ಈ ವೇಳೆ ಸಿದ್ದರಾಮಯ್ಯ ಅವರು ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು