News Karnataka Kannada
Friday, May 03 2024
ದೆಹಲಿ

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಿಎಂ ಸಿದ್ದು: ಬರ ಪರಿಸ್ಥಿತಿ ಬಗ್ಗೆ ಚರ್ಚೆ

Sidhu meets PM Modi, discusses drought situation
Photo Credit : News Kannada

ದೆಹಲಿ: ಸಂಸತ್​ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಟೀಕಿಸಿದ್ದರು. ಜೊತೆಗೆ ನಮ್ಮ ಸಚಿವರು ಭೇಟಿ ಮಾಡಲು ಯತ್ನಿಸಿದರೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಸದ್ಯ ಪ್ರಧಾನಿಯವರು ಸಿಎಂ ಸಿದ್ದರಾಮಯ್ಯರಿಗೆ ಭೇಟಿಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಮೋದಿಯವರನ್ನು ಭೇಟಿ ಮಾಡಿ ಬರದ ಬಗ್ಗೆ ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು