Categories: ದೆಹಲಿ

ʼಎವರೆಸ್ಟ್‌ ಫಿಶ್‌ ಕರಿʼ ಮಸಾಲೆಯನ್ನು ಬ್ಯಾನ್‌ ಮಾಡಿದ ಸಿಂಗಾಪುರ

ಹೊಸದಿಲ್ಲಿ: ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಬ್ಯಾನ್‌ ಮಾಡಲು ಸಿಂಗಾಪುರ ಆದೇಶಿಸಿದೆ. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಆರೋಪಿಸಿದೆ.

ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು SFA ಮಾಹಿತಿ ನೀಡಿದೆ.

ಸಿಂಗಾಪುರದ ಆಹಾರ ನಿಯಮಗಳ ಅಡಿಯಲ್ಲಿ, ಎಥಿಲೀನ್ ಆಕ್ಸೈಡ್ ಅನ್ನು ಮಸಾಲೆಗಳ ಸ್ಟೆರಿಲೈಸೇಶನ್‌ನಲ್ಲಿ ಮಾತ್ರ ಬಳಸಲು ಅನುಮತಿಸಲಾಗಿದೆ ಎಂದು SFA ಹೇಳಿದೆ.

ಕಡಿಮೆ ಮಟ್ಟದ ಎಥಿಲೀನ್ ಆಕ್ಸೈಡ್‌ ಸೇರಿರುವ ಆಹಾರವನ್ನು ಸೇವಿಸುವುದರಿಂದ ತಕ್ಷಣದ ಅಪಾಯವಿಲ್ಲ. ಆದರೆ ಇದರ ದೀರ್ಘಕಾಲಿಕ ಬಳಕೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಆಹಾರ ಸಂಸ್ಥೆ ತಿಳಿಸಿದೆ.

ಈ ಉತ್ಪನ್ನಗಳನ್ನು ಸೇವಿಸಿದವರು, ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವವರು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಗ್ರಾಹಕರು ವಿಚಾರಣೆಗಾಗಿ ತಮ್ಮ ಖರೀದಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು SFA  ಗ್ರಾಹಕರಿಗೆ ಮಾಹಿತಿಯನ್ನು ನೀಡಿದೆ.

 

Chaitra Kulal

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

12 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

29 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

50 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago