Categories: ದೆಹಲಿ

ಅಜೆಂಡಾ ಇಲ್ಲದ ಅಧಿವೇಶನಕ್ಕೆ ಆಹ್ವಾನ: ಪ್ರಧಾನಿಗೆ ಪತ್ರ ಬರೆದ ಸೋನಿಯಾ ಗಾಂಧಿ

ನವದೆಹಲಿ: ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಬಗ್ಗೆ ಯಾವುದೇ ಅಜೆಂಡಾ ಹೊಂದಿಲ್ಲದಿರುವುದನ್ನು ಆಕ್ಷೇಪಿಸಿ ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಅಲ್ಲದೆ ಪತ್ರದಲ್ಲಿ ವಿಶೇಷ ಅಧಿವೇಶನದಲ್ಲಿ ಕೇಂದ್ರ-ರಾಜ್ಯ ಸಂಬಂಧ, ಕೋಮುವಾದ ಮತ್ತು ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಚರ್ಚೆ ನಡೆಸುವಂತೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.

ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಸರ್ಕಾರ ಮುಂದಿಡಬಹುದು ಎಂದು ಮೂಲಗಳು ಹೇಳುತ್ತವೆ. ವಿಶೇಷ ಅಧಿವೇಶನಕ್ಕೆ ಸರ್ಕಾರ ಯಾವುದೇ ಅಜೆಂಡಾ ಪ್ರಕಟಿಸದಿರುವುದು ಊಹಾಪೋಹಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

Ashika S

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

19 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

37 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

53 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago