Categories: ದೆಹಲಿ

ರಾಜೀವ್ ಗಾಂಧಿ ಪುಣ್ಯತಿಥಿ: ಗೌರವ ನಮನ ಸಲ್ಲಿಸಿದ ಸೋನಿಯಾ, ಖರ್ಗೆ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 32 ನೇ ಪುಣ್ಯತಿಥಿಯಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಗೌರವ ನಮನ ಸಲ್ಲಿಸಿದರು.

ಇಲ್ಲಿನ ವೀರ ಭೂಮಿಯಲ್ಲಿ ಖರ್ಗೆ ಅವರು ಮಾಜಿ ಪ್ರಧಾನಿಗೆ ಪುಷ್ಪ ನಮನ ಸಲ್ಲಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಮೇ 21, 1991 ರಂದು ಹತ್ಯೆಗೀಡಾದ ಮಾಜಿ ಪ್ರಧಾನಿಗೆ ಪುಷ್ಪ ನಮನ ಸಲ್ಲಿಸಿದರು.

ರಾಹುಲ್ ಗಾಂಧಿ ತಮ್ಮ ತಂದೆಯ ವೀಡಿಯೊವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ಅಪ್ಪಾ, ನೀವು ಯಾವಾಗಲೂ ನನ್ನೊಂದಿಗೆ, ಸ್ಫೂರ್ತಿಯಲ್ಲಿ ಮತ್ತು ನನ್ನ ನೆನಪುಗಳಲ್ಲಿ ಇದ್ದೀರಿ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್‌ನಲ್ಲಿ  ಬಲವಾದ, ಸ್ವತಂತ್ರ, ಸ್ವಾವಲಂಬಿ ಮತ್ತು ವಿಶ್ವದ ರಾಷ್ಟ್ರಗಳ ಮುಂಚೂಣಿ ಸ್ಥಾನದಲ್ಲಿ ನಿಲ್ಲಲು  ರಾಜೀವ್ ಗಾಂಧಿ ಅವರ ಮಾತುಗಳು ನಮ್ಮೆಲ್ಲರಲ್ಲೂ ಪ್ರತಿಧ್ವನಿಸುತ್ತಲೇ ಇವೆ. 21 ನೇ ಶತಮಾನದ ಭಾರತವು ತನ್ನ ಅನೇಕ ಸಾಧನೆಗಳಿಗೆ ಈ ದೂರದೃಷ್ಟಿಯ ನಾಯಕನಿಗೆ ಋಣಿಯಾಗಿದೆ, ಅವರು ರಾಷ್ಟ್ರವನ್ನು ಪ್ರಗತಿ ಮತ್ತು ಆಧುನೀಕರಣದ ಕಡೆಗೆ ಮುನ್ನಡೆಸಿದ್ದಲ್ಲದೆ, ನಮ್ಮ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ನೀತಿಗಳ ಬೇರುಗಳನ್ನು ಬಲಪಡಿಸಿದರು.

ಏಕೀಕೃತ ಮತ್ತು ಸಹಿಷ್ಣುತೆಯನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ರಾಜೀವ್ ಜಿ ಅವರನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದು ಪಕ್ಷ ಹೇಳಿದೆ.

ಆಗಸ್ಟ್ 20, 1944 ರಂದು ಜನಿಸಿದ ರಾಜೀವ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಸಂಸದೀಯ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದರು.

1984 ರಿಂದ 1989 ರವರೆಗೆ ರಾಜೀವ್ ಗಾಂಧಿ ಭಾರತದ ಆರನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. 1984 ರಲ್ಲಿ ತಮ್ಮ ತಾಯಿ, ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ ಅವರು ಅಧಿಕಾರ ವಹಿಸಿಕೊಂಡರು.

1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಎಲ್ಟಿಟಿಇ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು.

Gayathri SG

Recent Posts

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

4 mins ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

25 mins ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

43 mins ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…

55 mins ago

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

8 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

9 hours ago