ನವದೆಹಲಿ: ಹೊಸ ಸಂಸತ್ ಅಧಿವೇಶನ ನಡೆಸಲು ದಿನಗಣನೆ ಆರಂಭವಾಗಿದೆ. ಸೆ. 18ರಂದು ಹಳೆಯ ಕಟ್ಟಡದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದೆ.
ಸೆ.19ರ ಗಣೇಶ ಚತುರ್ಥಿಯಂದು ಹೊಸ ಕಟ್ಟಡದಲ್ಲಿ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಐದು ದಿನಗಳ ವಿಶೇಷ ಅಧಿವೇಶನವನ್ನು ಯಾವ ಉದ್ದೇಶಕ್ಕಾಗಿ ಕರೆಯಲಾಗಿದೆ ಎಂಬ ಕುರಿತು ಮಾಹಿತಿ ಬಹಿರಂಗವಾಗಿಲ್ಲ. ವಿಶೇಷ ಅಧಿವೇಶನದ ಅಜೆಂಡಾ ಏನು ಎಂಬ ಬಗ್ಗೆ ಮಾಹಿತಿ ಇಲ್ಲ.
ವಿರೋಧ ಪಕ್ಷಗಳಿಗೆ ಮಾಹಿತಿ ನೀಡದೆಯೇ ಅಧಿವೇಶನ ಕರೆಯಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.