ದೆಹಲಿ

ಸೆಪ್ಟೆಂಬರ್ 18 ರಿಂದ ಸಂಸತ್ತಿನ ವಿಶೇಷ ಅಧಿವೇಶನ

ನವದೆಹಲಿ: ಸೆಪ್ಟೆಂಬರ್ 18 ಮತ್ತು 22 ರ ನಡುವೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ನೂತನ ಕಟ್ಟಡದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್‌ ಭವನ ಉದ್ಘಾಟಿಸಿದ್ದು, ಈ ವೇಳೆ ರಾಷ್ಟ್ರಪತಿ ಮುರ್ಮು ಅವರು ಪಾಲ್ಗೊಂಡಿರಲಿಲ್ಲ ಎಂದು ವಿಪಕ್ಷಗಳು ಕೋಲಾಹಲ ಎಬ್ಬಿಸಿದ್ದವು.
ಅಮೃತ್ ಕಾಲ್ ಸಂಸತ್ತಿನಲ್ಲಿ ಫಲಪ್ರದ ಚರ್ಚೆ ನಡೆಸಲು ಎದುರು ನೋಡುತ್ತಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಎಕ್ಸ್‌ ಮಾಡಿದ್ದಾರೆ. ಅಧಿವೇಶನದಲ್ಲಿ ಮುಂದಿನ 25 ವರ್ಷಗಳ ಮಾರ್ಗಸೂಚಿಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಸ್ತಿಪಟುಗಳ ಆಂದೋಲನ ಉತ್ತುಂಗದಲ್ಲಿರುವಾಗಲೇ ಪ್ರಧಾನಿಯವರಿಂದ ನೂತನ ಸಂಸತ್ ಭವನದ ಉದ್ಘಾಟನೆ ನಡೆದಿತ್ತು.

Ashika S

Recent Posts

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

6 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

13 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

25 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

30 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

44 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago