News Karnataka Kannada
Sunday, May 12 2024
ದೆಹಲಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್

ಮಂಡ್ಯದಲ್ಲಿ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯುಲು ಸುಮಲತಾ ಟಿಕೆಟ್​​ಗಾಗಿ ಕಸರತ್ತು ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್​ ಸಂತಸಗೊಂಡಿದ್ದು, ಈ ಬಾರಿ ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್​ ಸಿಗುವ ವಿಶ್ವಾಸದಲ್ಲಿದ್ದಾರೆ.
Photo Credit : News Kannada

ನವದೆಹಲಿ: ಮಂಡ್ಯದಲ್ಲಿ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯುಲು ಸುಮಲತಾ ಟಿಕೆಟ್​​ಗಾಗಿ ಕಸರತ್ತು ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್​ ಸಂತಸಗೊಂಡಿದ್ದು, ಈ ಬಾರಿ ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್​ ಸಿಗುವ ವಿಶ್ವಾಸದಲ್ಲಿದ್ದಾರೆ.

ಪ್ರಧಾನಿ ಮೋದಿ ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಸ್ವತಃ ಸುಮಲತ ಅವರೇ ಹೀಗೆ ಬರೆದುಕೊಂಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ. ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ. ಈ ಬಾರಿಯ ತಮ್ಮ ಭೇಟಿ ಸಂದರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ. ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಸುಮಲತಾ ಅಂಬರೀಶ್​ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು