Categories: ದೆಹಲಿ

ಏಪ್ರೀಲ್‌ನಲ್ಲಿ ಹೆಚ್ಚಲಿದೆ ಬಿಸಿಲಿನ ಧಗೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ

ನವದೆಹಲಿ: ಈಗಾಗಲೇ ಬಿಸಿಲಿನ ಧಗೆಯಲ್ಲಿ ಬೆಂದಿರುವ ಜನರಿಗೆ ಹವಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. ಏಪ್ರಿಲ್ ತಿಂಗಳ ಮೊದಲ ದಿನವೇ ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ನೀಡಿದೆ. ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಅತಿ ಹೆಚ್ಚು ಬಿಸಿಲಿನ ವಾತಾವರಣ ಮತ್ತು ಅತ್ಯಧಿಕ ಉಷ್ಣಾಂಶ ದಾಖಲಾಗಲಿದೆ.

ಆದರೆ ಜೂನ್‌ ಒಂದರ ಒಳಗಾಗಿ ಇನ್ನಷ್ಟು ತಾಪಮಾನದಲ್ಲಲಿ ಏರಿಕೆ ಆಗಲಿದ್ದು ಅದಕ್ಕೆ ಜನರು ತಯಾರಿರಬೇಕು ಎಂದು ಇಲಾಖೆ ತಿಳಿಸಿದೆ.ಭಾರತೀಯ ಹವಮಾನ ಇಲಾಖೆಯ ಮಾಹಿತಿಯ ಪ್ರಕಾರ ಈ ವರ್ಷದ ಏಪ್ರಿಲ್ ತಿಂಗಳು ಅತ್ಯಂತ ಸುಡೋ ಬಿಸಿಲಿನ ವಾತಾವರಣಕ್ಕೆ ಸಾಕ್ಷಿಯಾಗಲಿದೆ. ಪ್ರಮುಖವಾಗಿ ಗುಜರಾತ್, ಮಹಾರಾಷ್ಟ್ರ, ಉತ್ತರ ಕರ್ನಾಟಕ, ಒಡಿಶಾ, ಆಂಧ್ರ ಪ್ರದೇಶ, ಪೂರ್ವ ಮಧ್ಯ ಪ್ರದೇಶದಲ್ಲಿ ರಣ ಬಿಸಿಲಿನ ವಾತಾವರಣ ಎದುರಾಗಲಿದೆ ಎನ್ನುವ ಮಾಹಿತಿ ನೀಡಿದೆ.

ಇನ್ನು ಏಪ್ರಿಲ್‌ ತಿಂಗಳಲ್ಲಿ ಭಾರತದ ಮಧ್ಯ, ಉತ್ತರ, ದಕ್ಷಿಣದ 6 ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಲಿನ ವಾತಾವರಣ ಕಾಡಲಿದೆ ಎಂದು ಹೇಳಲಾಗಿದೆ. ಇಡೀ ತಿಂಗಳು ರಣ ಬಿಸಿಲು ತಡೆಯಲು ತಯಾರಿರಬೇಕು.

ಬಿಸಿಲಿನ ಬೇಗೆ ತಾಳಲಾರದೇ ಕೃತಕ ತಂಪು ಪಾನಿಗಳು ಮತ್ತು ಐಸ್ ಕ್ರೀಮ್ ಹೆಚ್ಚಾಗಿ ಸೇವಿಸುತ್ತಿರುವುದರಿಂದ ವೈರಲ್ ಫೀವರ್ ಹೆಚ್ಚಾಗುತ್ತಿದೆ. ರಣ ಬಿಸಿಲಿನ ಸಮಯದಲ್ಲಿ ಫ್ರಿಡ್ಜ್‌ನಲ್ಲಿಟ್ಟ ನೀರು ಮತ್ತು ಹೆಚ್ಚು, ಹೆಚ್ಚು ಐಸ್‌ಕ್ರೀಮ್‌ ತಿನ್ನುವುದರಿಂದ ದೂರ ಉಳಿಯೋದು ಒಳ್ಳೆಯದು

Nisarga K

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

9 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

27 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

47 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago