ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನೀಡಿದ 2 ವರ್ಷ ಜೈಲು ಶಿಕ್ಷೆ ಆದೇಶ ತಡೆ ನೀಡುವಂತೆ ಗುಜರಾತ್ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 4ರಂದು ವಿಚಾರಣೆ ನಡೆಸುದಾಗಿ ಸುಪ್ರೀಂ ಹೇಳಿದೆ.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿತ್ತು, ಆದರೆ ರಾಹುಲ್ ಗಾಂಧಿ ಈ ಶಿಕ್ಷೆಯನ್ನು ತಡೆಯುವಂತೆ ಗುಜರಾತ್ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜುಲೈ 15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಸುಪ್ರೀಂ ಅವರ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಜುಲೈ 18ರಂದು ಒಪ್ಪಿಗೆ ನೀಡಿತ್ತು, ಆದರೆ ಸುಪ್ರೀಂ ಇಂದು ಈ ವಿಚಾರಣೆಯನ್ನು ಆ.4ಕ್ಕೆ ಸುಪ್ರೀಂ ಮುಂದೂಡಿದೆ.