ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್ ನ್ಯಾಯಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅದರಂತೆ ಸುಪ್ರೀಂಕೋರ್ಟ್ ಜುಲೈ 21ರಂದು ವಿಚಾರಣೆ ನಡೆಸಲಾಗುವುದು ಎಂದು ದಿನಾಂ ನಿಗದಿ ಮಾಡಿತ್ತು. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.