News Karnataka Kannada
Monday, April 29 2024
ದೆಹಲಿ

ರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಟಿಎಂಸಿ ಸಂಸದರ ಬಂಧನ

TMC MPs detained for protesting at night
Photo Credit : IANS

ನವದೆಹಲಿ: ಕೇಂದ್ರದ ನಿಧಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಮತ್ತು ನಾಯಕರನ್ನು ಪೊಲೀಸರು ನಿರ್ದಯವಾಗಿ ಎಳೆದೊಯ್ದು ಬಂಧಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಆರೋಪಿಸಿದೆ.

ಸಚಿವರನ್ನು ಭೇಟಿಯಾಗುವಂತೆ ಒತ್ತಾಯಿಸಿ ಇಲ್ಲಿನ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಚೇರಿಯಲ್ಲಿ ಮಂಗಳವಾರ ರಾತ್ರಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಪಕ್ಷದ ಇತರ ಹಲವು ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯಕ್ಕೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಹಗ್ಗ ಜಗ್ಗಾಟ ತೀವ್ರಗೊಂಡಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸತತ ಎರಡನೇ ದಿನವೂ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು