News Karnataka Kannada
Tuesday, April 30 2024
ದೆಹಲಿ

ರೈಲು ಅಪಘಾತ: ಸಾವನ್ನಪ್ಪಿದವರ ಸಂಖ್ಯೆ 288 ಕ್ಕೆ ಏರಿಕೆ

Train accident: Death toll rises to 288
Photo Credit : News Kannada

ಭುವನೇಶ್ವರ/ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ರೈಲು ಹಳಿತಪ್ಪಿ ಸಾವನ್ನಪ್ಪಿದವರ ಸಂಖ್ಯೆ 288 ಕ್ಕೆ ಏರಿಕೆಯಾಗಿದ್ದು, ಸುಮಾರು 800 ಜನರು ಗಾಯಗೊಂಡಿದ್ದಾರೆ ಎಂದು ಆಗ್ನೇಯ ರೈಲ್ವೆ (ಎಸ್‌ಇಆರ್) ಶನಿವಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಬದುಕುಳಿದವರನ್ನು ಭೇಟಿ ಮಾಡಿದರು.

ಗಾಯಾಳುಗಳಿಗೆ ಸರ್ಕಾರ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಿದೆ ಎಂದು ಹೇಳಿದ ಮೋದಿ, ಅಪಘಾತದಲ್ಲಿ ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಹೇಳಿದರು. ಇದಕ್ಕೂ ಮುನ್ನ ರೈಲ್ವೆ ಸಚಿವ ಅಶ್ವಿನಿ ವಿಷ್ಣವ್ ಅವರು, ರೈಲು ಸುರಕ್ಷತಾ ಆಯುಕ್ತರಿಂದ ವಿವರವಾದ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು