News Karnataka Kannada
Monday, May 13 2024
ದೆಹಲಿ

ದೆಹಲಿ: ಇಬ್ಬರು ಐಐಟಿ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ, ಓರ್ವ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಹೊಸದಿಲ್ಲಿ,ಜ.18: ಐಐಟಿಯಲ್ಲಿ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿಗಳಿಗೆ ಸಂಸ್ಥೆಯ ಗೇಟ್ ನಂ.1ರ ಹೊರಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತನನ್ನು ಅಶ್ರಫ್ ನವಾಜ್ ಖಾನ್ (30) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಅಂಕುರ್ ಶುಕ್ಲಾ (29) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 11.15 ರ ಸುಮಾರಿಗೆ ಐಐಟಿ ದೆಹಲಿಯ ಗೇಟ್ ಸಂಖ್ಯೆ 1 ರ ಬಳಿ ಅಪಘಾತ ಸಂಭವಿಸಿದ್ದು, ಅಶ್ರಫ್ ಮತ್ತು ಅಂಕುರ್ ಎಂಬ ಇಬ್ಬರು ವಿದ್ಯಾರ್ಥಿಗಳು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಈ ಇಬ್ಬರೂ ವಿದ್ಯಾರ್ಥಿಗಳು ಐಐಟಿಯಲ್ಲಿ ಪಿಎಚ್.ಡಿ ಮಾಡುತ್ತಿದ್ದರು. ಚಿಕಿತ್ಸೆಯ ಸಮಯದಲ್ಲಿ ಅಶ್ರಫ್ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, ಅಂಕುರ್ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಾಲಿಗೆ ಮೂಳೆ ಮುರಿತವಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರೂ ಐಐಟಿ ದೆಹಲಿಯ ಎದುರಿನ ಎಸ್ ಡಿಎ  ಮಾರುಕಟ್ಟೆಯ ರೆಸ್ಟೋರೆಂಟ್ ಗೆ  ಹೋಗಿ ಊಟದ ನಂತರ ರಸ್ತೆ ದಾಟುತ್ತಿದ್ದರು. ನೆಹರೂ ಪ್ಲೇಸ್ ಕಡೆಯಿಂದ ಬರುತ್ತಿದ್ದ ಒಂದು ಕಾರು ರಸ್ತೆ ದಾಟುವಾಗ ಇಬ್ಬರಿಗೂ ಡಿಕ್ಕಿ ಹೊಡೆದಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಕಾರಿನ ಚಾಲಕನನ್ನು ಗುರುತಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು