News Karnataka Kannada
Saturday, April 20 2024
Cricket
ದೆಹಲಿ

ಏಕದಿನ ವಿಶ್ವಕಪ್‌ ನಲ್ಲಿಂದು ಎರಡು ಪಂದ್ಯಗಳು

Two matches in the World Cup
Photo Credit : News Kannada

ನವದೆಹಲಿ: ಏಕದಿನ ವಿಶ್ವಕಪ್ ನಲ್ಲಿಂದು ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಪಂದ್ಯದಲ್ಲಿ ಟಾಮ್ ಲಾಥಮ್ ನಾಯಕತ್ವದ ನ್ಯೂಝಿಲೆಂಡ್ ಮತ್ತು ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಮುಖಾಮುಖಿ ಆಗಲಿದೆ. ಮಧ್ಯಾಹ್ನ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಇಂಗ್ಲೆಂಡ್ ಹಾಗೂ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಸೆಣೆಸಾಟ ನಡೆಸಲಿದೆ.

ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಫಲಿತಾಂಶ ಕೇವಲ ಈ ಎರಡು ತಂಡಕ್ಕೆ ಮಾತ್ರವಲ್ಲದೆ ಇತರೆ ಟೀಮ್​ಗಳ ಮೇಲೂ ಪರಿಣಾಮ ಬೀರಲಿದೆ. ಇಂದು ನ್ಯೂಝಿಲೆಂಡ್ ಗೆದ್ದರೆ ಪಾಕಿಸ್ತಾನ, ಶ್ರೀಲಂಕಾ, ನೆದರ್ಲೆಂಡ್ಸ್ ಮತ್ತು ಇಂಗ್ಲೆಂಡ್ ತಂಡ ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ಬಾಬರ್ ಪಡೆ ಗೆಲ್ಲಲಿ ಎಂದು ಇತರೆ ತಂಡಗಳು ಕೂಡ ಹರಸುತ್ತಿದೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇಂಗ್ಲೆಂಡಿನ ಕಳಪೆ ಪ್ರದರ್ಶನ ಕಾಂಗರೂ ಪಡೆಯ ವಿರುದ್ಧವೂ ಮುಂದುವರೆಯುತ್ತಾ ನೋಡಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು