ದೆಹಲಿ: ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ್ದಾರೆ.
ನಖ್ವಿ ಅವರ ರಾಜ್ಯಸಭಾ ಸದಸ್ಯತ್ವ ಗುರುವಾರ ಕೊನೆಗೊಳ್ಳಲಿದ್ದು, ನಿಯಮಗಳ ಪ್ರಕಾರ ನಾಳೆಯೊಳಗೆ ಕೇಂದ್ರ ಸಂಪುಟಕ್ಕೆ ರಾಜೀನಾಮೆ ರಾಜೀನಾಮೆ ನೀಡುವುದು ಅವರಿಗೆ ಅನಿವಾರ್ಯವಾಗಿತ್ತು. ಹೀಗಾಗಿ ರಾಜೀನಾಮೆ ನೀಡಿದ್ದಾರೆ.