Categories: ದೆಹಲಿ

ಫ್ರಾನ್ಸ್‌ ನಲ್ಲಿ ಇನ್ಮುಂದೆ ಯುಪಿಐ ಬಳಕೆ ಸಾಧ್ಯ: ಮೋದಿ ಮಹತ್ವದ ಘೋಷಣೆ

ನವದೆಹಲಿ: ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಗೆ ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ. ಇನ್ನು ಮುಂದೆ ಭಾರತೀಯ ಪ್ರವಾಸಿಗರು ಫ್ರಾನ್ಸ್‌ ಗೆ ಭೇಟಿ ನೀಡುವ ವೇಳೆ ರೂಪಾಯಿಗಳಲ್ಲಿಯೇ ಪಾವತಿ ನಡೆಸಬಹುದು ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ.

ಫ್ರಾನ್ಸ್‌ಗೆ ಭೇಟಿ ನೀಡಿದ ಮೊದಲ ದಿನ ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಫ್ರಾನ್ಸ್‌ನಲ್ಲಿ ಭಾರತದ ಯುಪಿಐ ಬಳಕೆ ಒಪ್ಪಂದ ಅಂತಿಮಗೊಳಿಸಲಾಗಿದೆ ಎಂದು ಘೋಷಿಸಿದರು.

ಭಾರತೀಯ ಪ್ರವಾಸಿಗರು ಐಫೆಲ್ ಟವರ್‌ಗೆ ಭೇಟಿ ನೀಡುವ ವೇಳೆ ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ ರೂಪಾಯಿಯಲ್ಲಿ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದರು. ಈ ವೇಳೆ ಅನಿವಾಸಿ ಭಾರತೀಯರಿಂದ ಭಾರಿ ಕರತಾಡನ ಮೊಳಗಿತು.
2022 ರಲ್ಲಿ, ಯುಪಿಐ ಸೇವೆಗಳನ್ನು ಒದಗಿಸುವ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ), ಫ್ರಾನ್ಸ್‌ನ ಆನ್‌ಲೈನ್ ಪಾವತಿ ವ್ಯವಸ್ಥೆ ಲೈರಾದೊಂದಿಗೆ ಸಹಿಹಾಕಿತ್ತು.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

1 hour ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago