News Karnataka Kannada
Thursday, May 02 2024
ದೆಹಲಿ

ಜಿ20 ಶೃಂಗಸಭೆ: ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಬೈಡನ್ ಆಗಮನ

Us President Biden arrives in India for G20 Summit
Photo Credit : IANS

ನವದೆಹಲಿ: ಭಾರತದಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಜಿ20 ಶೃಂಗಸಭೆ ನಡೆಯಲಿದ್ದು ಇದಕ್ಕಾಗಿ ಜಿ20 ನಾಯಕರು ಆಗಮಿಸಲಿದ್ದಾರೆ. ಇನ್ನು ಶೃಂಗಸಭೆಗೂ ಎರಡು ದಿನ ಮುಂಚೆಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮೊದಲಿಗೆ ಭಾರತಕ್ಕೆ ಆಗಮಿಸಿದ್ದು 18ನೇ ಜಿ20 ಶೃಂಗಸಭೆಗೆ ಕ್ಷಣಗಣನೆಗೆ ಶುರುವಾಗಿದೆ.

ಜಕಾರ್ತಾದಲ್ಲಿ ನಡೆಯಲಿರುವ ಆಸಿಯಾನ್ ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 7ರಂದು ಸಂಜೆ ದೆಹಲಿಗೆ ಮರಳಲಿದ್ದಾರೆ. ಶೃಂಗಸಭೆಯ ಪೂರ್ವಭಾವಿಯಾಗಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಬೈಡನ್ ಸೆ.8ರಂದು ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಹೆಚ್ಚಿನ ನಾಯಕರು ಸೆ.8ರ ಸಂಜೆಯೊಳಗೆ ದೆಹಲಿಗೆ ಆಗಮಿಸುತ್ತಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಖ್ಯ ಶೃಂಗಸಭೆಯು ಭಾರತ ಮಂಟಪದಲ್ಲಿ ಸೆಪ್ಟೆಂಬರ್ 9ರಂದು ಪ್ರಗತಿ ಮೈದಾನದಲ್ಲಿ ಪ್ರಾರಂಭವಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು