ದೆಹಲಿ

ಸಾಹಿತಿ ಬೈರಪ್ಪ, ಎಸ್‌. ಎಂ. ಕೃಷ್ಣ, ಸುಧಾಮೂರ್ತಿಗೆ ಮಾ. 22ರಂದು ಪದ್ಮಪ್ರಶಸ್ತಿ ಪ್ರದಾನ

ನವದೆಹಲಿ: ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು  ಮಾರ್ಚ್ 22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಒಟ್ಟು 106 ಮಂದಿಗೆ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಕರ್ನಾಟಕದಿಂದ ಯಾರಿಗೆಲ್ಲ ಪ್ರಶಸ್ತಿ: ಕರ್ನಾಟಕದಿಂದ ಸಾಹಿತಿ ಎಸ್.​ಎಲ್. ಭೈರಪ್ಪ ಮತ್ತು ಮಾಜಿ ಸಿಎಂ ಎಸ್.​ಎಂ. ಕೃಷ್ಣ ಮತ್ತು ಇನ್ಫೋಸಿಸ್‌ ಮುಖ್ಯಸ್ಥೆ ಸುಧಾ ಮೂರ್ತಿ ಸೇರಿದಂತೆ ಎಂಟು ಮಂದಿ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹನೀಯರನ್ನು ಗೌರವಿಸುವ ನಿಟ್ಟಿನಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತದೆ.

ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪ್ರಸಕ್ತ ಸಾಲಿನ ಪದ್ಮವಿಭೂಷಣ (ಸಾರ್ವಜನಿಕ ವ್ಯವಹಾರ ಕ್ಷೇತ್ರ), ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರು ಪದ್ಮಭೂಷಣ (ಸಾಹಿತ್ಯ ಮತ್ತು ಶಿಕ್ಷಣ) ಮತ್ತು ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿಯವರ ಸಾಮಾಜಿಕ ಸೇವೆಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಖಾದರ್ ವಲ್ಲಿ ದೂದೇಕುಲ (ವಿಜ್ಞಾನ ಮತ್ತು ಇಂಜಿನಿಯರಿಂಗ್), ಎಂಎಸ್ ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಶಾ ರಶೀದ್ ಅಹ್ಮದ್ ಕ್ವಾದ್ರಿ (ಕಲೆ), ಎಸ್ ಸುಬ್ರಮಣ್ (ಇತರ ಕ್ಷೇತ್ರ) ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಸಕ್ತ ವರ್ಷ ಒಟ್ಟು 106 ಮಂದಿ ಆಯ್ಕೆಯಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Umesha HS

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago