News Karnataka Kannada
Thursday, May 02 2024
ದೆಹಲಿ

ವಿಡಿಯೋ ವೈರಲ್: ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಎಂಎಸ್ ಧೋನಿ

Video goes viral: MS Dhoni plays golf with Donald Trump
Photo Credit : IANS

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಗಾಲ್ಫ್ ಆಟವನ್ನು ಆಡುತ್ತಿರುವುದು ಕಂಡು ಬಂದಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ (ಯುಎಸ್ಎ) ತಮ್ಮ ರಜೆಯನ್ನು ಆನಂದಿಸುತ್ತಿದ್ದಾರೆ. ಸದ್ಯ ಯುಎಸ್ ಪ್ರವಾಸದಲ್ಲಿರುವ ಕೂಲ್ ಕ್ಯಾಪ್ಟನ್ ಅವರು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಗಾಲ್ಫ್ ಆಟವನ್ನು ಆಡುತ್ತಿರುವ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ.

ಧೋನಿ ಹಾಗೂ ಟ್ರಂಪ್ ಗಾಲ್ಫ್ ಆಡುತ್ತಿರುವ ಮಧ್ಯೆ ಫೋಟೋಕ್ಕೆ ಪೋಸ್ ನೀಡಿದ್ದು, ಎಲ್ಲೆಡೆ ಹರಿದಾಡುತ್ತಿದೆ. ವೈರಲ್ ಫೋಟೋದಲ್ಲಿ ಧೋನಿ ಮತ್ತು ಟ್ರಂಪ್ ಪಕ್ಕದಲ್ಲಿ ನಿಂತಿದ್ದಾರೆ.

ವರದಿಗಳ ಪ್ರಕಾರ, ಧೋನಿ ಅವರು ಯುಎಸ್ ಪ್ರವಾಸದಲ್ಲಿ ಇದ್ದಾರೆ ಎಂಬುದನ್ನು ಅರಿತು ಸ್ವತಃ ಟ್ರಂಪ್ ಅವರೇ ಧೋನಿಯನ್ನು ಗಾಲ್ಫ್ ಆಟಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು