ದೆಹಲಿ

ಭಾರತದ ಮೊದಲ “ಬುಲೆಟ್ ರೈಲು ನಿಲ್ದಾಣ”ದ ವಿಡಿಯೋ ಬಿಡುಗಡೆ

ಹೊಸದಿಲ್ಲಿ: ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ಮೊದಲ ವಿಡಿಯೋವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಇಂದು ಬಿಡುಗಡೆ ಮಾಡಿದ್ದಾರೆ. ಅಹಮದಾಬಾದ್‌ ನಲ್ಲಿರುವ ಸಬರಮತಿ ಮಲ್ಟಿಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ನಲ್ಲಿ ಈ ರೈಲು ನಿಲ್ದಾಣವಿದೆ.

ಮುಂಬೈ ಮತ್ತು ಅಹಮದಾಬಾದ್ ನಡುವಿನ ಭಾರತದ ಮೊದಲ ಅತ್ಯಾಧುನಿಕ ಹೈಸ್ಪೀಡ್ ರೈಲ್ ಕಾರಿಡಾರ್ ನಿರ್ಮಾಣವು ವೇಗವಾಗಿ ನಡೆಯುತ್ತಿದೆ. ಮಹತ್ವಾಕಾಂಕ್ಷೆಯ ಯೋಜನೆಯು ಪಶ್ಚಿಮ ಭಾರತದ ಎರಡು ಪ್ರಮುಖ ಹಣಕಾಸು ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಇದು 508 ಕಿಮೀ ವ್ಯಾಪಿಸಿದೆ, ಇದರಲ್ಲಿ 448 ಕಿಮೀ ಎಲಿವೇಟೆಡ್, 26 ಕಿಮೀ ಸುರಂಗಗಳಲ್ಲಿ, 10 ಕಿಮೀ ಸೇತುವೆಗಳಲ್ಲಿ ಮತ್ತು 7 ಕಿಮೀ ಏರಿಯ ಮೇಲೆ ಚಲಿಸುತ್ತದೆ.

ಇನ್ನು ಸುಮಾರು 1,33,000 ಚದರ ಮೀಟರ್‌ಗಳ ಒಟ್ಟು ವಿಸ್ತೀರ್ಣದೊಂದಿಗೆ, ಕಟ್ಟಡವನ್ನು ಅವಳಿ ರಚನೆಯಾಗಿ ನಿರ್ಮಿಸಲಾಗುತ್ತಿದ್ದು, ಕಚೇರಿಗಳು, ಕಮರ್ಷಿಯಲ್ ಡೆವೆಲಪ್ ಮೆಂಟ್ ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಜಾಗವನ್ನು ಮೀಸಲಿಡಲಾಗಿದೆ. 2027 ರ ವೇಳೆಗೆ ಈ ನಿಲ್ದಾಣದ ಕೆಲಸ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ.

Ramya Bolantoor

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago