News Karnataka Kannada
Thursday, April 25 2024
Cricket
ದೆಹಲಿ

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ವಿಜಯೇಂದ್ರ: ಶಾ ಭೇಟಿ ಬಳಿಕ ಬಿ.ಎಸ್‌. ವೈ ಪುತ್ರ ಹೇಳಿದ್ದೇನು?

Vijayendra to take over as leader of opposition: BS Yediyurappa after Shah's meeting What BSY's son said
Photo Credit : News Kannada Twitter

ನವದೆಹಲಿ: ರಾಜ್ಯ ರಾಜ್ಯ ಬಿಜೆಪಿಯಲ್ಲಿ ಖಾಲಿ ಇರುವ ವಿರೋಧ ಪಕ್ಷದ ನಾಯಕನ ಹುದ್ದೆ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಇದೇ ವಿಷಯವನ್ನಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್‌ ಬಿಜೆಪಿಯನ್ನು ಹಿಗ್ಗಾಮುಗ್ಗಾ ಜಾಡಿಸುತ್ತಿದೆ. ಆದರೂ ಇದುವರೆಗೂ ವಿರೋಧ ಪಕ್ಷದ ನಾಯಕ ಹುದ್ದೆ ಭರ್ತಿ ಮಾಡುವುದು ಬಿಜೆಪಿಗೆ ಸಾಧ್ಯವಾಗಿಲ್ಲ. ಈ ನಡುವೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಿಜೆಪಿ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಇದು ಕರ್ನಾಟಕ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಅಮಿತ್‌ ಶಾ, ಜೆಪಿ ನಡ್ಡಾ ಭೇಟಿ ಬಗ್ಗೆ ಟ್ವೀಟ್‌ ಮೂಲಕ ಬಿವೈ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಮಾನ್ಯ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದೇನೆ. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆದೆ ಎಂದು ಹೇಳಿದ್ದಾರೆ.

ಇನ್ನು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬುಧವಾರ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಲಾಗಿದೆ ಎಂದು ಹೇಳಿದ್ದಾರೆ. ವಿಧಾನಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವ ಕುರಿತು ಹಾಗೂ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಪಡೆದೆ ಎಂದು ಮಾಹಿತಿ ನೀಡಿದ್ದಾರೆ. ಈ ಎರಡೂ ಭೇಟಿ ಬಿ.ಎಸ್‌. ವೈ ಪುತ್ರ ವಿಜಯೇಂದ್ರಗೆ ವಿರೋಧ ಪಕ್ಷದ ನಾಯಕ ಹುದ್ದೆ ದೊರೆಯಲಿದೆ ಎಂಬ ಸುದ್ದಿಗೆ ಇಂಬು ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು