ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ವಿಶ್ವಕರ್ಮ ದಿನಾಚರಣೆಯ ದಿನದಂದು, ವಿಶ್ವಕರ್ಮ ಯೋಜನೆಯನ್ನು ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು. ಸಾಂಪ್ರದಾಯಿಕ ಕೌಶಲ್ಯ ಹೊಂದಿರುವವರಿಗೆ ಮುಂದಿನ ತಿಂಗಳಲ್ಲಿ 13,000 ರಿಂದ 15,000 ಕೋಟಿ ರೂ.ಗಳ ಹಂಚಿಕೆಯೊಂದಿಗೆ ಸರ್ಕಾರ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ತಮ್ಮ ‘140 ಕೋಟಿ ಕುಟುಂಬ ಸದಸ್ಯರಿಗೆ’ ಶುಭ ಕೋರಿದರು.
‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಪ್ರಮುಖ ದೇಶವಾಗಿದೆ. ಇಷ್ಟು ದೊಡ್ಡ ದೇಶದಲ್ಲಿ, ನನ್ನ ಕುಟುಂಬದ 140 ಕೋಟಿ ಸದಸ್ಯರು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದಾರೆ’ ಎಂದು ಅವರು ಹೇಳಿದರು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆಯ ದೃಷ್ಟಿಯಿಂದ ಪ್ರಮುಖ ದೇಶವಾಗಿದೆ ಎಂದರು: