ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಇಂದು 77 ನೇ ಹುಟ್ಟುಹಬ್ಬ. ಇವರು ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ನಾಯಕಿಯ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥಿಸಿದ್ದಾರೆ. “ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಮತ್ತು ಆರೋಗ್ಯಕರ ಜೀವನ ದೊರೆಯಲಿ ” ಎಂದು ಪ್ರಧಾನಿ ಮೋದಿ ಅವರು ಎಕ್ಸ್ನಲ್ಲಿ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಶಶಿ ತರೂರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಮಾಜಿ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿಗೆ ಶುಭಶಾಯ ಕೋರಿದ್ದಾರೆ.
ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ಸೋನಿಯಾ ಗಾಂಧಿ ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ, “ಅಂಚಿನಲ್ಲಿರುವವರ ಹಕ್ಕುಗಳ ನಿರಂತರ ಪ್ರತಿಪಾದಕರಾದ ಅವರು ಧೈರ್ಯ ಮತ್ತು ನಿಸ್ವಾರ್ಥ ಸೇವೆಯೊಂದಿಗೆ ಪ್ರತಿಕೂಲ ಪರಿಸ್ಥಿತಿಯ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಧೈರ್ಯದ ಸಂಕೇತವಾಗಿದ್ದಾರೆ. ನಾನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಬಯಸುತ್ತೇನೆ ಎಂದು ಖರ್ಗೆ ಶುಭ ಕೋರಿದ್ದಾರೆ.
Birthday greetings to Smt. Sonia Gandhi Ji. Praying for her long and healthy life.
— Narendra Modi (@narendramodi) December 9, 2022