Categories: ದೆಹಲಿ

ಸೋನಿಯಾ ಗಾಂಧಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಪ್ರಧಾನಿ ಮೋದಿ ಹೇಳಿದ್ದೇನು?

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಇಂದು 77 ನೇ ಹುಟ್ಟುಹಬ್ಬ. ಇವರು ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್​ ನಾಯಕಿಯ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥಿಸಿದ್ದಾರೆ. “ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಮತ್ತು ಆರೋಗ್ಯಕರ ಜೀವನ ದೊರೆಯಲಿ ” ಎಂದು ಪ್ರಧಾನಿ ಮೋದಿ ಅವರು ಎಕ್ಸ್​ನಲ್ಲಿ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಶಶಿ ತರೂರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಮಾಜಿ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿಗೆ ಶುಭಶಾಯ ಕೋರಿದ್ದಾರೆ.

ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ಸೋನಿಯಾ ಗಾಂಧಿ ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ, “ಅಂಚಿನಲ್ಲಿರುವವರ ಹಕ್ಕುಗಳ ನಿರಂತರ ಪ್ರತಿಪಾದಕರಾದ ಅವರು ಧೈರ್ಯ ಮತ್ತು ನಿಸ್ವಾರ್ಥ ಸೇವೆಯೊಂದಿಗೆ ಪ್ರತಿಕೂಲ ಪರಿಸ್ಥಿತಿಯ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಧೈರ್ಯದ ಸಂಕೇತವಾಗಿದ್ದಾರೆ. ನಾನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಬಯಸುತ್ತೇನೆ ಎಂದು ಖರ್ಗೆ ಶುಭ ಕೋರಿದ್ದಾರೆ.

 

Ramya Bolantoor

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

17 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

35 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

51 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago