News Karnataka Kannada
Tuesday, May 07 2024
ದೆಹಲಿ

ಕೈ ಹೈ ವೋಲ್ಟೇಜ್‌ ಸಭೆಯಲ್ಲಿ ಬಿಜೆಪಿ ಕುರಿತು ಶೆಟ್ಟರ್‌, ಸವದಿ ಹೇಳಿದ್ದೇನು

What Shettar, Savadi said about BJP at kai high voltage meeting
Photo Credit : Twitter

ನವದೆಹಲಿ: 2024ರ ಲೋಕಸಭಾ ಚುನಾವಣೆ ಸಿದ್ಧತೆ ದೃಷ್ಟಿಯಿಂದ ಎಐಸಿಸಿ ರಾಜ್ಯ ಕಾಂಗ್ರೆಸ್ ನಾಯಕರ ಜತೆ ದೆಹಲಿಯಲ್ಲಿ ಮೊದಲ ಹಂತದ ಸಭೆಯನ್ನು ಬುಧವಾರ ನಡೆಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಂಸದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಗೆಲ್ಲುವ ಸೂತ್ರದ ಪಾಠ: 5 ಉಚಿತ ಗ್ಯಾರಂಟಿಗಳು ಸರಿಯಾಗಿ ಜಾರಿಯಾಗಬೇಕು. ಅದಕ್ಕಾಗಿ ಫಲಾನುಭವಿಗಳ ಸಭೆ ನಡೆಸಬೇಕು. ಫಲಾನುಭವಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಸಂಪರ್ಕ ಮಾಡಬೇಕು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ತಡವಾಗಬಾರದು. ಸೂಕ್ತವಾದ ಅಭ್ಯರ್ಥಿಗಳನ್ನು ಗುರುತಿಸಿ ಆದಷ್ಟು ಬೇಗ ಅಖಾಡಕ್ಕೆ ಬಿಡಬೇಕು. ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವ ಕಾರ್ಯಕ್ರಮ ರೂಪಿಸಬೇಕು.

ಬಿಜೆಪಿಯ ಹಿಂದೂ ಮುಸ್ಲಿಂ ವಿಭಜನೆ ತಂತ್ರಕ್ಕೆ ಪ್ರತಿತಂತ್ರ ರೂಪಿಸಬೇಕು. ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಬೇಕು ಎಂದು ರಾಜ್ಯ ನಾಯಕರಿಗೆ ಎಐಸಿಸಿ ನಾಯಕರು ಸೂಚಿಸಿದ್ದಾರೆ. ಅಲ್ಲದೆ ಸಚಿವರ ವಿರುದ್ಧ ದೂರು ಬರದಂತೆ ನೋಡಿಕೊಳ್ಳಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಚೇರಿ ಇರುವಂತೆ ನೋಡಿಕೊಳ್ಳಬೇಕು ಎಂದೆಲ್ಲ ಸೂಚನೆ ನೀಡಿದ್ದಾರೆ.

ಶೆಟ್ಟರ್‌, ಸವದಿ ಮಾತು: ಸಭೆಯಲ್ಲಿ ಪಾಲ್ಗೊಂಡಿದ್ದ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿಗೆ ಕರ್ನಾಟಕದಲ್ಲಿ ನಾಯಕತ್ವವೇ ಇಲ್ಲದಂತಾಗಿದೆ. ಈ ಸಮಯ ಬಳಸಿಕೊಂಡು ಪಕ್ಷ ಸಂಘಟಿಸಬೇಕು. ಜನರ ಮನಗೆಲ್ಲಬೇಕು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು