ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭೆಯಿಂದ ಅನರ್ಹಗೊಂಡ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ. ಆದರೆ ನಾನು ಪ್ರಧಾನಿ ಮೋದಿ ಮತ್ತು ಅದಾನಿ ಗ್ರೂಪ್ ನಡುವಿನ ಬಗ್ಗೆ ಪ್ರಶ್ನೆ ಕೇಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೌತಮ್ ಅದಾನಿ ನಡುವಿನ ಸಂಬಂಧ ಹೊಸದಲ್ಲ’ ಎಂದೂ ಅವರು ಆರೋಪಿಸಿದ್ದಾರೆ. ಶೆಲ್ ಕಂಪನಿಗಳ 20,000 ಕೋಟಿ ರೂ. ಯಾರ ಹಣ ಎಂಬ ಬಗ್ಗೆ ಮಾತನಾಡುವುದನ್ನು ನಿಲ್ಲಿಸುವುದಿಲ್ಲ ಎಂದರು. 2019 ರ “ಮೋದಿ ಉಪನಾಮ” ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಒಂದು ದಿನದ ನಂತರ ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.