ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 22 ರವೆರೆಗೆ ಅಧಿವೇಶನ ನಡೆಯಲಿದೆ ಎಂದು ಹೇಳಲಾಗಿದೆ.
ಡಿಸೆಂಬರ್ 3 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮರುದಿನವೇ ಅಧಿವೇಶನ ಪ್ರಾರಂಭವಾಗಲಿವೆ ಎಂದು ತಿಳಿಸಲಾಗಿದೆ.
ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿಸೆಂಬರ್ 2 ರಂದು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಸಂಸತ್ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆ ನಡೆಯಬೇಕಿತ್ತು ಆದರೆ 5 ರಾಜ್ಯಗಳ ಚುನಾವಣಾ ಫಲಿತಾಂಶಗಳು ಡಿಸೆಂಬರ್ 3 ರಂದು ಪ್ರಕಟವಾಗುವುದರಿಂದ ಡಿಸೆಂಬರ್ 2 ರಂದು ಸಭೆ ನಡೆಯಲಿದೆ.
ಪ್ರಮುಖ ವಿಧೇಯಕಗಳನ್ನು ಅಂಗೀಕರಿಸಲು ಮುಂದಾಗಿರುವ ಎನ್ ಡಿಎ ಸರ್ಕಾರದ ಮೇಲೆ 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.