ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ 33 ವರ್ಷದ ಮಹಿಳೆಯೊಬ್ಬರು ಮಹಿಳೆಯೊಬ್ಬರು 6 ತಿಂಗಳ ಮಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.
ಮಹಿಳೆಯನ್ನು ಸಾರಿಕಾ ಎಂದು ಗುರುತಿಸಲಾಗಿದೆ.
ತಡರಾತ್ರಿ, ಲಾ ರೆಸಿಡೆನ್ಶಿಯಾ ಸೊಸೈಟಿಯ ಟವರ್ 2 ರಿಂದ ಬೀಳುವ ದೊಡ್ಡ ಶಬ್ದ ಕೇಳಿಸಿತು. ಘಟನಾ ಸ್ಥಳಕ್ಕೆ ಸೊಸೈಟಿ ಸಿಬ್ಬಂದಿ ಆಗಮಿಸಿದಾಗ ಮಹಿಳೆ ಹಾಗೂ ಆಕೆಯ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಸಾವನ್ನಪ್ಪಿದ್ದರು.
ಭದ್ರತಾ ತಂಡವು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸಾರಿಕಾ ಅನಾರೋಗ್ಯದಿಂದ ಬಳಲುತ್ತಿದ್ದು, ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೃತಳ ಸಂಬಂಧಿಕರು ಮಾಹಿತಿ ನೀಡಿದ್ದಾರೆ.
ಈ ಘಟನೆ ಬಿಶ್ರಖ್ ಏರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821