Categories: ದೆಹಲಿ

ವಿಮಾನದಲ್ಲಿ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ: ಚಿಕಿತ್ಸೆ ನೀಡಿ ರಕ್ಷಣೆ ಮಾಡಿದ ವೈದ್ಯರಿಗೆ ಪ್ರಶಂಸೆ

ನವದೆಹಲಿ: ವಿಮಾನ ಪ್ರಯಾಣ ವೇಳೆ ಅನಾರೋಗ್ಯ ಉಂಟಾಗುವ ಹಲವು ಪ್ರಕರಣಗಳು ನಡೆಯುತ್ತಿರುತ್ತಿವೆ. ಅದೇ ರೀತಿ ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗ ಮಧ್ಯೆ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ ಬೆಂಗಳೂರು ಮೂಲದ ವೈದ್ಯರೊಬ್ಬರು ಆಕೆಗೆ ಚಿಕಿತ್ಸೆ ನೀಡುವ ಮೂಲಕ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದ್ದಾರೆ.

ಬೆಂಗಳೂರು ಮೂಲದ ಡಾ. ಸುಂದರ್ ಶಂಕರನ್ ಅವರ ತ್ವರಿತ ಮತ್ತು ಪರಿಣಾಮಕಾರಿ ಮಧ್ಯಸ್ಥಿಕೆಯಿಂದಾಗಿ ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಅಪಾಯಕ್ಕೆ ಸಿಲುಕಿದ್ದ ಮಹಿಳೆಯ ಜೀವ ಉಳಿದಿದೆ. ಈ ಕುರಿತಂತೆ ಸ್ವತಃ ವೈದ್ಯ ಡಾ. ಸುಂದರ್ ಶಂಕರನ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಸಂದರ್ಭಕ್ಕೆ ಸರಿಯಾಗಿ ಮಹಿಳೆಗೆ ಚಿಕಿತ್ಸೆ ನೀಡಿದ್ದರಿಂದ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ನನಗೆ ಏರ್ ಇಂಡಿಯಾ ಮೂಲಕ ದೆಹಲಿಯಿಂದ ಟೊರೊಂಟೊಗೆ ಹೋಗುವ ದಾರಿಯಲ್ಲಿ ನಾನು ಮತ್ತು ಟೊರೊಂಟೊದ ವಿಕಿರಣಶಾಸ್ತ್ರಜ್ಞ ಸತೀಶ್ ರವರು ಮೂರ್ಛೆ ರೋಗ ಹೊಂದಿದ್ದ ಮಧ್ಯವಯಸ್ಕ ಮಹಿಳೆಗೆ ಚಿಕಿತ್ಸೆ ನೀಡಲು ಕರೆದರು. ವಿಮಾನವು ಇನ್ನೂ ಟೇಕ್ ಆಫ್ ಆಗಿರಲಿಲ್ಲ ಮತ್ತು ಅದೃಷ್ಟವಶಾತ್ ಆಕೆಯ ಅಂಗಾಗಗಳು ಸ್ಥಿರವಾಗಿದ್ದವು ಮತ್ತು ಸ್ಥಳೀಯ ವೈದ್ಯರ ಸಹಾಯದಿಂದ ನಾವು ಆಕೆಯನ್ನು ವಿಮಾನದ ಸಿಬ್ಬಂದಿಗಳ ನೆರವಿನಿಂದ ವಿಮಾನದಿಂದ ಕೆಳಗಿಳಿಸಲಾಯಿತು. ಏರ್ ಇಂಡಿಯಾ ಸಿಬ್ಬಂದಿಗಳು ತುಂಬಾ ಸಹಕಾರಿ ಮತ್ತು ವೃತ್ತಿಪರರಾಗಿದ್ದರು ಭದ್ರತಾ ಕಾಳಜಿಯಿಂದಾಗಿ ಇಡೀ ವಿಮಾನವು ಭದ್ರತಾ ತಪಾಸಣೆಗೆ ಒಳಗಾಯಿತು ಮತ್ತು ಕ್ಲಿಯರೆನ್ಸ್ ಮತ್ತು ಹಾರಾಟವು ಒಂದು ಗಂಟೆ ವಿಳಂಬವಾಯಿತು ಎಂದು ಅವರು ಟ್ವೀಟ್ ಮಾಡಿದ್ದಾರೆ.

Gayathri SG

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

15 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

29 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

45 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

48 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

2 hours ago