News Karnataka Kannada
Sunday, April 14 2024
Cricket
ದೆಹಲಿ

ಮಹಿಳೆ ನಗ್ನ ಮೆರವಣಿಗೆ ಪ್ರಕರಣ, ಆರೋಪಿಯ ಮನೆಗೆ ಬೆಂಕಿ

Woman's naked procession case, accused's house set on fire
Photo Credit : News Kannada

ನವದೆಹಲಿ: ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಮೆರವಣಿಗೆ ಪೈಶಾಚಿಕ ಪ್ರಕರಣ ಬೆಳಕಿಗೆ ಬಂದ 48 ಗಂಟೆಗಳಲ್ಲಿ ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈಶಾನ್ಯ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.

ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದ್ದರೆ, ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳದೆ ಟೀಕೆ ಎದುರಿಸುತ್ತಿದೆ. ಮಹಿಳೆ ನಗ್ನ ಮೆರವಣಿ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಪ್ರಮುಖ ಆರೋಪಿ ಹುರಿಯಮ್ ಹೆರೋದಾಸ್ ಮೈತಿ ಮನೆಗ ಬೆಂಕಿ ಹಚ್ಚಲಾಗಿದೆ. ಮಹಿಳೆ ನಗ್ನ ಮೆರವಣಿ ಪ್ರಕರಣದ ಪ್ರಮುಖ ಆರೋಪಿಗಳ ಮನೆಗೆ ಬೆಂಕಿ ಹಚ್ಚಲಾಗಿದ್ದ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಕೆಲ ಕಿಡಿಗೇಡಿಗಳು ರಾತ್ರೋ ರಾತ್ರಿ ಹುರಿಯಮ್ ಹೆರೋದಾಸ್ ಮೈತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ದೇಶದಲ್ಲೇ ಆಕ್ರೋಶ ಹೆಚ್ಚಾಗಿದೆ. ಇದೇ ಸಂದರ್ಭ ಬಳಸಿಕೊಂಡ ಕಿಡಿಗೇಡಿಗಳು ಮತ್ತೆ ಮಣಿಪುರದಲ್ಲಿ ಹಿಂಸಾಚಾರ ಆರಂಭಿಸಿದ್ದಾರೆ. ಮಹಿಳೆ ನಗ್ನ ಮೆರವಣಿಗೆ ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಈ ಪೈಕಿ ಓರ್ವ ಆರೋಪಿ ಮನೆ ಸುಟ್ಟು ಭಸ್ಮವಾಗಿದೆ. ಇನ್ನು ವಿಡಿಯೋದಲ್ಲಿ ಕಾಣುವ ಹಲವು ಆರೋಪಿಗಳ ಮನೆ ಮೇಲೂ ದಾಳಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು