Categories: ದೆಹಲಿ

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ

ನವದೆಹಲಿ:  ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ  ಹೇಳಿದೆ. ಕೊರೊನಾದ ಹೊಸ ರೂಪಾಂತರಿ ಜೆಎನ್​1 ಮತ್ತು ಇನ್​ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ  ಸೂಚಿಸಿದೆ.

ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ  ಏರಿಕೆಯಾಗಿದೆ .  ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.

ಕ್ರಿಸ್ಮಸ್​ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್‌ ಮತ್ತೆ ಭೀತಿ ಹುಟ್ಟಿಸಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ.

ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ.  ಬೆಂಗಳೂರಿನಲ್ಲಿ 350-400 ಟೆಸ್ಟ್ ನಡೆಸುತ್ತಿದ್ದು 1000 ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ.

Ramya Bolantoor

Recent Posts

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

6 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

17 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

34 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

45 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

59 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago