ದೆಹಲಿ

ಕಳೆದ 4 ವರ್ಷಗಳಲ್ಲಿ ರೈಲ್ವೆ ಇಲಾಖೆಯ ಸಾಲದ ಹೊರೆ ಹೆಚ್ಚಳ: ರೈಲ್ವೆ ಸಚಿವ ಮಾಹಿತಿ

ನವದೆಹಲಿ: ಭಾರತೀಯ ರೈಲ್ವೇಯ ಸತತ ಪ್ರಯತ್ನಗಳ ಹೊರತಾಗಿಯೂ ಕಳೆದ ನಾಲ್ಕು ವರ್ಷಗಳಲ್ಲಿ ಇಲಾಖೆಯ ಸಾಲದ ಹೊರೆ ಹೆಚ್ಚಾಗಿದೆ. 2019-20ರ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆ ಇಲಾಖೆಯ ಸಾಲದ ಹೊರೆ 20,304 ಕೋಟಿ ರೂಪಾಯಿಗಳಿದ್ದರೆ 2020-21ರಲ್ಲಿ 23,386 ಕೋಟಿ ರೂಪಾಯಿಗಳಾದವು.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸತ್ತಿನಲ್ಲಿ ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, ಸಾಲವು 2020-21 ರಲ್ಲಿ 23,386 ಕೋಟಿ ರೂಪಾಯಿಗಳಿಂದ 2021-22 ರಲ್ಲಿ 28,702 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಇದು 5,316 ಕೋಟಿ ರೂಪಾಯಿಗಳಷ್ಟು ತೀವ್ರ ಹೆಚ್ಚಳವನ್ನು ಕಂಡಿದೆ. 2019-20 ರಿಂದ 2020-21 ರವರೆಗಿನ ಸಾಲದ ಅಂಚು 2020-21 ರಲ್ಲಿ 3,086 ಕೋಟಿ ರೂಪಾಯಿಗಳಿಂದ 2021-22 ರಲ್ಲಿ 5,316 ಕೋಟಿ ರೂಪಾಯಿಗಳ ಮಟ್ಟಕ್ಕೆ ಮುಂದುವರೆಯಿತು.

ರೋಲಿಂಗ್ ಸ್ಟಾಕ್ ಆಸ್ತಿಗಳ ಸ್ವಾಧೀನ ಮತ್ತು ಇತರ ಯೋಜನೆಗಳ ನಿರ್ಮಾಣಕ್ಕೆ ಹಣಕಾಸು ಒದಗಿಸುವುದಕ್ಕಾಗಿ ರೈಲ್ವೇ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಉದ್ಯಮವಾಗಿರುವ ಇಂಡಿಯನ್ ರೈಲ್ವೇ ಫೈನಾನ್ಸ್ ಕಾರ್ಪೊರೇಷನ್ ಮೂಲಕ ಹೆಚ್ಚುವರಿ ಬಜೆಟ್ ಸಂಪನ್ಮೂಲಗಳನ್ನು ರೈಲ್ವೇಸ್ ಸಂಗ್ರಹಿಸಿದೆ.

ದೊಡ್ಡ ಯೋಜನೆಗಳೇ ಸಾಲದ ಹೆಚ್ಚಳಕ್ಕೆ ಕಾರಣ ಎನ್ನುತ್ತಾರೆ ರೈಲ್ವೆ ಅಧಿಕಾರಿಗಳು. ಅದೇ ರೀತಿಯಲ್ಲಿ, ಸೇವೆಗಳು ಮತ್ತು ಸೇವೆಯೇತರ ಸಂಪನ್ಮೂಲಗಳ ಮೂಲಕ ಆದಾಯವನ್ನು ಹೆಚ್ಚಿಸುವ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ರೈಲ್ವೆಯ ಸಾಲವು 2022-23 ರಲ್ಲಿ 34,189 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಇದು 9,487 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ನಾವು ಬಹಳಷ್ಟು ಬೃಹತ್ ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಲೆಕ್ಕಚಾರ ನೀಡಿದ್ದಾರೆ.

Ashitha S

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

23 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

41 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

58 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago